ಕೋಟ: ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಧ್ಯದಲ್ಲೆ ಮೂಟೆಗಟ್ಟಲೆ ತ್ಯಾಜ್ಯ ಎಸೆದ ಘಟನೆ ನಡೆದಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು ಅದಾನ ಸಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಾಣಿಸಿಕೊಂಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡಿದ್ದು ಇದನ್ನು ಗಮನಿಸಿದ ಕೋಟದ ಪಂಚವರ್ಣ ಸಂಘಟನೆ ಅಧ್ಯಕ್ಷ ಮನೋಹರ್ ಪೂಜಾರಿ ಮತ್ತವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಕೆ.ಕೆ ಆರ್ ಕಂಪನಿ ಹಾಗೂ ಕೋಟ ಗ್ರಾಮಪಂಚಾಯತ್ ಮಾಹಿತಿ ನೀಡಿ, ತ್ಯಾಜ್ಗ ತೆರವಿಗೆ ನೆರವಾಗಿದ್ದಾರೆ.
