Tuesday, July 14, 2026

spot_img

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನ ಹುಚ್ಚಾಟ: ವಾಹನ ತಡೆದು ಆತಂಕ, ಪೊಲೀಸರ ಮೇಲೂ ಕತ್ತಿ ಬೀಸಿ ಹಲ್ಲೆಗೆ ಯತ್ನ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ಯುವಕನೊಬ್ಬ ರಸ್ತೆಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೂ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಕೋಟ ಪೊಲೀಸರು ಯುವಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತನನ್ನು ಕೋಟ ಸಮೀಪದ ಬೆಲ್ಲದ ಗಣಪತಿ ದೇವಸ್ಥಾನದ ನಿವಾಸಿ ರಂಜಿತ್ ಸೋಮಯಾಜಿ (25) ಎಂದು ಗುರುತಿಸಲಾಗಿದೆ. ರಂಜಿತ್ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಟೇಬಲ್ ಇಟ್ಟು ಅದರ ಮೇಲೆ ಟಿವಿ ಅಳವಡಿಸಿ, ಜೋರಾಗಿ ಸಂಗೀತ ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಉದ್ದನೆಯ ತಲೆಕೂದಲು ಹಾಗೂ ಗಡ್ಡದೊಂದಿಗೆ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನನ್ನು ಕಂಡು ವಾಹನ ಸವಾರರು ಮತ್ತು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೋಟ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಯುವಕ ಪೊಲೀಸರ ಮೇಲೆಯೇ ಕತ್ತಿ ಬೀಸಿ ಹಲ್ಲೆ ನಡೆಸಲು ಯತ್ನಿಸಿದನೆಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಯುವಕ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳನ್ನು ತೋರಿಸಿದ್ದಾನೆ ಎನ್ನಲಾಗಿದ್ದರೂ, ಆತನಿಗೆ ಮಾನಸಿಕ ಚಿಕಿತ್ಸೆಯನ್ನು ಪಡೆಯುತ್ತಿರುವುದಕ್ಕೆ ಸಂಬಂಧಿಸಿದ ಯಾವುದೇ ವೈದ್ಯಕೀಯ ದಾಖಲೆಗಳು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕೋಟ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಕೃತ್ಯ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles