Friday, June 19, 2026

spot_img

ರಾಹುಲ್ ಗಾಂಧಿ ಜನ್ಮದಿನಾಚರಣೆ: ವಿಶೇಷ ಚೇತನರಿಗೆ ಸಹಾಯಕ ಸಾಧನಗಳ ವಿತರಣೆ

ಉಡುಪಿ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣಾ ಕಾರ್ಯಕ್ರಮ ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಹುಲ್ ಗಾಂಧಿ ಅವರು ದೇಶದ ಭವಿಷ್ಯದ ನಾಯಕರಾಗಿದ್ದು, ಟೀಕೆ-ವಿಮರ್ಶೆಗಳ ನಡುವೆಯೂ ಸಾಮಾಜಿಕ ನ್ಯಾಯದ ಪರ ಧ್ವನಿ ಎತ್ತುತ್ತಿರುವ ನಾಯಕ ಎಂದು ಪ್ರಶಂಸಿಸಿದರು.

ಜನರ ನೋವಿಗೆ ಸ್ಪಂದಿಸುವ, ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ರಾಹುಲ್ ಗಾಂಧಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ತರವಾಗಿದ್ದು, ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ಕಾಂಗ್ರೆಸ್ ಪಕ್ಷವೇ ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿರುವ ರಾಜಕೀಯ ಶಕ್ತಿ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಹಿಸಿದ್ದರು. ಈ ಸಂದರ್ಭದಲ್ಲಿ ಸುಮಾರು 75 ಮಂದಿ ವಿಶೇಷ ಚೇತನರಿಗೆ ಶ್ರವಣ ಸಾಧನ, ಕಮೋಡ್ ವೀಲ್‌ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕೃತಕ ಸಹಾಯಕ ಉಪಕರಣಗಳು ಹಾಗೂ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿ ಪ್ರಸಾದ್ ರೈ, ಎಂ.ಎ. ಗಫೂರ್, ಕೇಶವ ಕೋಟ್ಯಾನ್, ಪ್ರಖ್ಯಾತ್ ಶೆಟ್ಟಿ, ನರಸಿಂಹಮೂರ್ತಿ, ಸದಾನಂದ ಕಾಂಚನ್, ಹಬೀಬ್ ಅಲಿ, ಕುಶಾಲ್ ಶೆಟ್ಟಿ, ಮಹಾಬಲ ಕುಂದರ್, ಪ್ರಶಾಂತ್ ಜತ್ತನ್ನ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಹಮ್ಮದ್, ಸೂರಜ್ ಕಲ್ಮಾಡಿ, ಸೌರಭ್ ಬಲ್ಲಾಳ್, ಸುರೇಶ್ ಶೆಟ್ಟಿ ಬನ್ನಂಜೆ, ರಾಘವೇಂದ್ರ ಎನ್., ಮಮತಾ ಶೆಟ್ಟಿ, ಹರೀಶ್ ಕಿಣಿ, ಕೀರ್ತಿ ಶೆಟ್ಟಿ, ಕಿಶನ್ ಹೆಗ್ಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles