ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ವಿಕಲಚೇತನರಿಗೆ ಕೃತಕ ಕಾಲುಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶನಿವಾರ ಕುಂದಾಪುರ ತಾಲೂಕು ಪಂಚಾಯತ್ ಸಂಕೀರ್ಣದ ಆವರಣದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನೆರವಿನ ರೂಪದಲ್ಲಿ ಆಯೋಜಿಸಲ್ಪಟ್ಟಿತ್ತು. ಕ್ಷೇತ್ರದ ವಿವಿಧ ಭಾಗಗಳಿಂದ ಬಂದ ವಿಕಲಚೇತನರು ಈ ಪ್ರಯೋಜನವನ್ನು ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶ್ರೀಮತಿ ರತ್ನ, ಪಿ.ಎನ್.ಒ. ಡೆನಿಸ್ ಡಿಸಿಲ್ವಾ, ಎಂ.ಆರ್.ಡಬ್ಲ್ಯೂ. ಮಂಜುನಾಥ್ ಹೆಬ್ಬಾರ್, ಕಚೇರಿ ಸಹಾಯಕ ಪ್ರದೀಪ್ ಹಾಗೂ ಸುಕನ್ಯ, ಮತ್ತು ಶಾಸಕರ ಆಪ್ತ ಕಾರ್ಯದರ್ಶಿ ಮಹಿಮ ಶೆಟ್ಟಿ ಕೆ. ಉಪಸ್ಥಿತರಿದ್ದರು. ಫಲಾನುಭವಿಗಳು ಶಾಸಕರ ಈ ಜನಪರ ಕಾರ್ಯವನ್ನು ಮೆಚ್ಚಿ ಕೃತಜ್ಞತೆ ವ್ಯಕ್ತಪಡಿಸಿದರು.
