Tuesday, November 17, 2026

spot_img

ವಿದ್ಯುತ್ ತಂತಿ ತಗುಲಿ ಒಣ ಹುಲ್ಲಿನ ಲಾರಿಗೆ ಬೆಂಕಿ

ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದ ಆರೂರು ತೆಂಕುಬೆಟ್ಟುವಿನಲ್ಲಿ ಒಣ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ನಡೆದಿದೆ.

ಲಾರಿಯಲ್ಲಿ ಒಣ ಹುಲ್ಲಿನ ಮೂಟೆಗಳನ್ನು ಸಾಗಿಸುತ್ತಿದ್ದ ವೇಳೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಹುಲ್ಲಿಗೆ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹರಡುವುದನ್ನು ಗಮನಿಸಿದ ಚಾಲಕ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ಹೊತ್ತಿಕೊಂಡಿದ್ದ ಎರಡು ಹುಲ್ಲಿನ ಮೂಟೆಗಳನ್ನು ರಸ್ತೆಗೆ ಎಸೆದಿದ್ದಾರೆ.

ಬಳಿಕ ಲಾರಿಯನ್ನು ಸಮೀಪದ ಕ್ರೀಡಾಂಗಣದ ಬಳಿಗೆ ಕೊಂಡೊಯ್ದು ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಬೆಂಕಿ ಲಾರಿಗೆ ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಗಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

ಘಟನೆಯ ಮಾಹಿತಿ ತಿಳಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.‌ ವಿದ್ಯುತ್ ತಂತಿ ಸ್ಪರ್ಶದಿಂದ ಸಂಭವಿಸಿದ ಈ ಘಟನೆಯಲ್ಲಿ ಸುಮಾರು 1.5 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles