Tuesday, March 3, 2026

spot_img

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜುನಲ್ಲಿ:10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ  ಉಡುಪಿಯಲ್ಲಿ 10 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಗುರುಗಳು ಹಾಗೂ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ವೈದ್ಯ ಡಾ. ಎ. ರಾಘವೇಂದ್ರ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಯುರ್ವೇದದಿಂದ ರೋಗಿಗಳನ್ನು ಗುಣಪಡಿಸಿದ ಚಿಕಿತ್ಸಾ ಅನುಭವವನ್ನು ಹಂಚಿಕೊಂಡರು.

 ರೋಟೇರಿಯನ್ ಪಿ.ಎಚ್.ಎಫ್, ಪಿ.ಡಿ.ಜಿ. ದೇವಾನಂದ ಗೌರವ ಅತಿಥಿಗಳಾಗಿ ಭಾಗವಹಿಸಿ, ಸಮಾಜ ಸೇವೆಯಲ್ಲಿ ಆಯುರ್ವೇದ ವೈದ್ಯರು ಸಮರ್ಪಣಾ ಭಾವದಿಂದ ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ನಿರಂಜನ್ ರಾವ್‌  ಇಂದಿನ ಆಧುನಿಕ ಯುಗದಲ್ಲಿ ಆಯುರ್ವೇದದ ಅಗತ್ಯತೆಯನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಹಾಗೂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್.  ಮಾರ್ಗದರ್ಶನದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

 ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ದೀಪಕ್ ಎಸ್.ಎಮ್., ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ನಿಶಾಂತ್ ಪೈ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಶ್ರೀಕಾಂತ್ ಪಿ., ಸ್ನಾತಕ ವಿಭಾಗದ ಡೀನ್ ಡಾ. ಪ್ರಥ್ರಿರಾಜ್ ಪುರಾಣಿಕ್‌ ಉಪಸ್ಥಿತರಿದ್ದರು. ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನಡೆದ ಹಲವಾರು ಕಾರ್ಯಕ್ರಮಗಳ ವರದಿಯನ್ನು ಆಸ್ಪತ್ರೆಯ ವೈದ್ಯರಾದ ಡಾ. ಸುಷ್ಮಾ ಶೆಣೈ ವಾಚಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಸರಿತಾ ಟಿ.ಯವರು ಆಯುರ್ವೇದ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಪ್ರಾಧ್ಯಾಪಕರಾದ ಡಾ. ರಾಕೇಶ್ ಆರ್. ಸ್ವಾಗತಿಸಿ, ಆಂತರಿಕ ಆಡಳಿತ ಸಮಿತಿಯ ಮುಖ್ಯಸ್ಥರಾದ ಡಾ. ವಿಜಯ್ ನೆಗಳೂರ್‌  ವಂದಿಸಿದರು. ಶ್ರೀಮತಿ ಸುಚಿತ್ರಾ ಎನ್. ಪ್ರಭು ಕಾರ್ಯಕ್ರಮವನ್ನು ನಿರೂಪಿಸಿದರು.  

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles