Thursday, September 3, 2026

spot_img

ಸರ್ಕಾರಿ ಅಕ್ಕಿ ಹೆಸರಿನಲ್ಲಿ ಬೆದರಿಕೆ; ಮೂವರು ಆರೋಪಿಗಳ ಬಂಧನ

ಉಡುಪಿ: ಮನೆಯ ಅಂಗಳದಲ್ಲಿ ಸರ್ಕಾರಿ ಅಕ್ಕಿ ಚೀಲಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಸುಲಿಗೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.31ರಂದು ನಡೆದ ಘಟನೆಗೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಆರ್. ಮತ್ತು ತನಿಖಾಧಿಕಾರಿ ಮಹಾಂತೇಶ ಜಾಬಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣದ ಆರೋಪಿಗಳಾದ ನಾಗೇಂದ್ರ ಪುತ್ರನ್ ಅಲಿಯಾಸ್ ನಾಗೇಂದ್ರ ಕೆ.ಕೆ. (37) ಹಾಗೂ ಪಿ. ಸುಮಂತ್ ಕುಂದರ್ (40) ಇವರನ್ನು ಸೆ.2ರಂದು ಮೈಸೂರು ಅರಮನೆ ಎದುರಿನ ವಸ್ತುಪ್ರದರ್ಶನ ಮೈದಾನದ ಬಳಿ ಬಂಧಿಸಿದ್ದಾರೆ.  ಇನ್ನೊರ್ವ ಆರೋಪಿ ಸಚಿನ್ ಶ್ರೀಯಾನ್ (32) ನಿವಾಸಿಯನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಾರ್ಯಾಚರಣೆಯಲ್ಲಿ ಕೋಟ ಠಾಣೆಯ ಸಿಬ್ಬಂದಿಗಳಾದ ವಿಜಯೇಂದ್ರ, ಶರತ್ ಹಾಗೂ ಶಿವರಾಜ್ ಸಹಕರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles