Monday, March 2, 2026

spot_img

ಸಾಮಾಜಿಕ ಜಾಲತಾಣದಲ್ಲಿ ಛಾಯಾಗ್ರಾಹಕರಿಗೆ ಅವಹೇಳನ : ಕುಂದಾಪುರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಆಕ್ರೋಶ

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಛಾಯಾಗ್ರಾಹಕರ ವಿರುದ್ಧ ಅವಹೇಳನಕಾರಿ ಬರವಣಿಗೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಸ್ರೂರಿನ ದಿವಾಕರ ಶೆಟ್ಟಿ ಎಂಬುವರ ವಿರುದ್ಧ ಕುಂದಾಪುರ ತಾಲೂಕು ಫೋಟೋಗ್ರಾಫರ್ಸ್ ಅಸೋಸಿಯೇಷನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಅಸೋಸಿಯೇಷನ್‌ನ ಸದಸ್ಯರು ಕುಂದಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿ, ತಪ್ಪಿತಸ್ಥನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಅಸೋಸಿಯೇಷನ್ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಮಾತನಾಡಿ, ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಟೀಕೆ ಮಾಡಿರುವುದು ಖಂಡನೀಯ. ಇದು ಛಾಯಾಗ್ರಾಹಕರ ಗೌರವಕ್ಕೆ ಧಕ್ಕೆ ತರುತ್ತದೆ. ಪೊಲೀಸರಿಂದ ನ್ಯಾಯಯುತ ಕ್ರಮವನ್ನು ನಿರೀಕ್ಷಿಸುತ್ತೇವೆ ಎಂದರು.

ಅಸೋಸಿಯೇಷನ್ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು, ಈ ಘಟನೆ ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರ ಮನಸ್ಸಿಗೆ ನೋವುಂಟುಮಾಡಿದೆ. ನಾವು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಲಕ ಜಿಲ್ಲೆಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ದೂರುಗಳನ್ನು ಸಲ್ಲಿಸುವ ಯೋಜನೆ ಕೈಗೊಂಡಿದ್ದೇವೆ  ಎಂದರು.

ಸುಮಾರು ಐವತ್ತಕ್ಕೂ ಹೆಚ್ಚು ಛಾಯಾಗ್ರಾಹಕರು ಪೊಲೀಸ್ ಠಾಣೆಗೆ ಹಾಜರಾಗಿ ವೃತ್ತ ನಿರೀಕ್ಷಕ ಜಯರಾಮ ಡಿ. ಗೌಡ ಅವರಿಗೆ ಮನವಿ ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles