ಕೋಟ : ಬೆಳ್ಳಂಬೆಳಿಗ್ಗೆ ಸಾಸ್ತಾನ ಟೋಲ್ ಗೇಟ್ ಬಳಿ ಕಂಬಕ್ಕೆ ಢಿಕ್ಕಿ ಹೊಡೆದ ಸರಕಾರಿ ಬಸ್. ಉಡುಪಿ ಜಿಲ್ಲೆಯ ಸಾಸ್ತಾನ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಇರುವ ಟೋಲ್ ಗೇಟ್ ಬಳಿ ನಡೆದ ಘಟನೆ.

ಇಳಕಲ್ ನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ. ಬಸ್ ಇದಾಗಿದ್ದು, ಘಟನೆಯಲ್ಲಿ ಸುಮಾರು 13 ಮಂದಿ ಗಾಯಗೊಂಡಿದ್ದಾರೆ. ಕೆ.ಎಸ್.ಆರ್.ಟಿ. ಬಸ್ ಟೋಲ್ ಗೇಟ್ ಬಳಿ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದಿದೆ. ಬಸ್ ನಲ್ಲಿ 36 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅಪಘಾತದ ತೀವ್ರತೆ 12 ಮಂದಿ ಗಾಯಗೊಂಡು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಲೆ ಬಸ್ ನ ವೇಗ ಎಷ್ಟಿತ್ತು ಎಂದರೆ ಢಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಬಸ್ ಚಾಲಕ, ನಿರ್ವಾಹಕ ಮತ್ತು ಉಳಿದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಟೋಲ್ ಗೇಟ್ ನ ಅಂಬ್ಯುಲೆನ್ಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ಅಂಬ್ಯುಲೆನ್ಸ್ ಚಾಲಕರು ಸೇರಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೋಟ ಪೊಲೀಸ್ ರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
