Wednesday, June 17, 2026

spot_img

ಹಳ್ಳೀ ಎಸ್. ರಾಮಚಂದ್ರ ಶಾಸ್ತ್ರಿ ನಿಧನ

ಉಡುಪಿ : ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮದ ಹಳ್ಳೀಮಠದ ನಿವಾಸಿ ಎಸ್. ರಾಮಚಂದ್ರ ಶಾಸ್ತ್ರಿ (52) ಅವರು ಸೋಮವಾರ ನಿಧನರಾದರು. ಮನೆಯ ಜಾವಣಿಯಿಂದ (ಮಾಳಿಗೆಯಿಂದ) ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸರಳ ವ್ಯಕ್ತಿತ್ವದವರಾಗಿದ್ದ ರಾಮಚಂದ್ರ ಶಾಸ್ತ್ರಿಯವರು ಯಕ್ಷಗಾನ ಕಲೆಯ ಅಭಿಮಾನಿಯಾಗಿದ್ದು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಅವರು ಪತ್ನಿ, ಓರ್ವ ಪುತ್ರಿ, ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles