Saturday, June 28, 2025

spot_img

ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ದಂಪತಿ : ಕಾಪು ಮಾರಿಯಮ್ಮ ಸನ್ನಿದಾನ ಭೇಟಿ

ಉಡುಪಿ : ಅಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ದಂಪತಿಗಳು ಹಾಗೂ ಪುತ್ರ ಮತ್ತು ಅವರ ಹಿರಿಯ ಸಹೋದರ ವಿಶ್ವನಾಥ್ ಭಟ್ ದಂಪತಿಗಳು, ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪತ್ನಿ ದೇವಿಗೆ ಪಟ್ಟೆಸೀರೆ ಮತ್ತು ಕಾಣಿಕೆಯನ್ನು ಅರ್ಪಿಸಿದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳ ಸಮಕ್ಷಮದಲ್ಲಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ಪ್ರಚಾರ ಸಮಿತಿ ಪ್ರಧಾನ ಸಂಚಾಲಕ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಜಿರ್ಣೋದ್ಧಾರ ನಡೆದು ಬಂದ ಹಾದಿ ಮತ್ತು ಮುಂದಿನ ಕಾರ್ಯ ಯೋಜನೆಯ ಬಗ್ಗೆ ವಿವರಿಸಿದರು. ದೇವಳದ ವಾಸ್ತುಶಿಲ್ಪವನ್ನು ಕಂಡು ಈ ದೇವಳಕ್ಕೆ ನನ್ನ ಸಂಪರ್ಕದಲ್ಲಿರುವ ಹಲವಾರು ಗಣ್ಯರನ್ನು ಭೇಟಿ ಮಾಡಲು ತಿಳಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಶೇಖರ್ ಸಾಲ್ಯಾನ್, ಮನೋಹರ್ ರಾವ್ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles