Wednesday, September 23, 2026

spot_img

ಅಕ್ರಮ ಕೆಂಪುಕಲ್ಲು ಗಣಿಗಾರಿಕೆ: ರೂ.16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ : ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ, ಸುಮಾರು ರೂ.16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಲ್ತೋಡು ಬೀಟ್ ಅಧಿಕಾರಿಯಿಂದ ಲಭಿಸಿದ ಮಾಹಿತಿಯ ಮೇರೆಗೆ ಬೈಂದೂರು ಠಾಣೆಯ ಪಿ.ಎಸ್‌.ಐ. ಸುನಿಲ್ ಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿಕೊಂಡು, ಮಧ್ಯಾಹ್ನ 1.15ರ ಸುಮಾರಿಗೆ ಬ್ಯಾಟಿಯಾಣಿ ಪ್ರದೇಶದಲ್ಲಿನ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದರು.

ದಾಳಿಯ ವೇಳೆ ಕೆಂಪುಕಲ್ಲು ತುಂಬಿದ್ದ ಎರಡು ಟಿಪ್ಪರ್‌ಗಳು, ಬ್ಲೇಡ್ ಅಳವಡಿಸಲಾಗಿದ್ದ ಎರಡು ಪವರ್ ಟಿಲ್ಲರ್ ಯಂತ್ರಗಳು ಹಾಗೂ ಎರಡು ಕಲ್ಲು ಎತ್ತುವ ಟ್ರಾಲಿ ಯಂತ್ರಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂ.16 ಲಕ್ಷ ಎಂದು ತಿಳಿದುಬಂದಿದೆ.

ಈ ಸಂಬಂಧ ರವೀಂದ್ರ ಪೂಜಾರಿ ಹಾಗೂ ಸತೀಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದೇ ಕಲ್ಲುಕೋರೆಯಲ್ಲಿ ಈ ಹಿಂದೆ ಕಾರ್ಮಿಕನೋರ್ವ ಮೃತಪಟ್ಟಿದ್ದ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ಪ್ರಕರಣ ವ್ಯಾಪಕವಾಗಿ ಸುದ್ದಿಯಾಗಿತ್ತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles