Thursday, March 5, 2026

spot_img

ಅಹಮದಾಬಾದ್ ನಲ್ಲಿ‌ ವಿಮಾನ ದುರಂತ: ದಿಗ್ಬ್ರಮೆ ವ್ಯಕ್ತಪಡಿಸಿದ ಲಕ್ಷ್ಮೀ ಹೆಬ್ಬಾಳಕರ್

  • ಬೆಂಗಳೂರು: ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಇಂದು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು, ಸಾವು ನೋವುಗಳಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಯಾವುದೇ ರೀತಿಯ ಹೆಚ್ಚಿನ ಅನಾಹುತ ಆಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿರುವುದು ಅತ್ಯಂತ ದುರ್ದೈವದ ಸಂಗತಿ. ಈ ದುರಂತದಲ್ಲಿ ಸಾವಿಗೀಡಾಗಿರುವ ಪ್ರಯಾಣಿಕರ ಕುಟುಂಬಗಳಿಗೆ ಭಗವಂತ ನೋವು ಸಹಿಸುವ ಶಕ್ತಿಯನ್ನು ನೀಡಲಿ ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ‌ ಎಂದು ಪ್ರಾರ್ಥಿಸುತ್ತೇನೆ‌ ಎಂದು ಸಚಿವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles