Monday, September 21, 2026

spot_img

ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಉಡುಪಿ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಅ.1ರಂದು ಬೆಳಗ್ಗೆ 10 ಗಂಟೆಗೆ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ. ಅದಕ್ಕೂ ಮುನ್ನ ಬೆಳಗ್ಗೆ 9 ಗಂಟೆಯಿಂದ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುವುದು ಎಂದರು.

ದಿನಾಚರಣೆ ಅಂಗವಾಗಿ ಸೆ.28ರಂದು ಬೆಳಗ್ಗೆ 9 ಗಂಟೆಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬಿರುಸಿನ ನಡಿಗೆ, ಬಕೆಟ್‌ಗೆ ಬಾಲ್ ಎಸೆಯುವುದು, ಕೇರಂ, ರಂಗೋಲಿ, ಗಾಯನ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆಯಲಿವೆ. ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಚಾರ ಕೈಗೊಳ್ಳಬೇಕು ಹಾಗೂ ಕ್ರೀಡಾಕೂಟದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಅ.1ರ ಕಾರ್ಯಕ್ರಮದ ಬಳಿಕ ಮೂರು ತಲೆಮಾರುಗಳ ಪ್ರತಿನಿಧಿಗಳಾದ ಹಿರಿಯ ನಾಗರಿಕರು, ಪೋಷಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು. ಹಿರಿಯ ನಾಗರಿಕರು ತಮ್ಮ ಜೀವನ ಮೌಲ್ಯಗಳು, ವಿಚಾರಧಾರೆ, ಉಡುಗೆ-ತೊಡುಗೆ ಮತ್ತು ಆಹಾರ ಪದ್ಧತಿಗಳ ಮಹತ್ವ ಸೇರಿದಂತೆ ವಿವಿಧ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಇದೇ ವೇಳೆ ಶತಾಯುಷಿಗಳನ್ನು ಸನ್ಮಾನಿಸಲಾಗುವುದು.

ಹಿರಿಯ ನಾಗರಿಕರಿಗೆ ಕುಡಿಯುವ ನೀರು, ಊಟೋಪಚಾರ, ಆಸನ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ವಿವಿಧ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಪ್ರೇಮಮೂರ್ತಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಟಿ.ಎನ್. ಮಂಜುಳಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಹೆಗಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles