Wednesday, May 20, 2026

spot_img

ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಜಿಲ್ಲಾದ್ಯಂತ ಫಾರ್ಮಸಿ ಬಂದ್

ಉಡುಪಿ : ಆನ್‌ಲೈನ್ ಔಷಧಿ ಮಾರಾಟ ಹಾಗೂ ಇ-ಕಾಮರ್ಸ್ ಸಂಸ್ಥೆಗಳ ಅನಿಯಂತ್ರಿತ ವ್ಯವಹಾರವನ್ನು ವಿರೋಧಿಸಿ ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘಟನೆ ನೀಡಿದ ಕರೆಯಂತೆ ಉಡುಪಿ ಜಿಲ್ಲೆಯಾದ್ಯಂತ ಬುಧವಾರ ನೂರಾರು ಫಾರ್ಮಸಿಗಳು ಬಂದ್ ಆಚರಿಸಿತು.

ಈ ಹೋರಾಟಕ್ಕೆ ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ ಬೆಂಬಲ ಸೂಚಿಸಿದ್ದ ಹಿನ್ನೆಲೆಯಲ್ಲಿ ಮೇ 19ರ ಮಧ್ಯರಾತ್ರಿ 12 ಗಂಟೆಯಿಂದ ಮೇ 20ರ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಅನೇಕ ಔಷಧ ಮಳಿಗೆಗಳು ಬಾಗಿಲು ಮುಚ್ಚಿದವು.

ಜಿಲ್ಲೆಯ ಹೋಲ್‌ಸೇಲ್ ಔಷಧ ವ್ಯಾಪಾರಸ್ಥರು ಹಾಗೂ ಸರ್ಜಿಕಲ್ ವ್ಯಾಪಾರಸ್ಥರೂ ಸಹ ತಮ್ಮ ಸಂಸ್ಥೆಗಳನ್ನು ಬಂದ್ ಮಾಡಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಇ-ಫಾರ್ಮಸಿ ಸಂಸ್ಥೆಗಳ ಹೆಚ್ಚುತ್ತಿರುವ ಪ್ರಭಾವದಿಂದ ಸಾಂಪ್ರದಾಯಿಕ ಔಷಧ ವ್ಯಾಪಾರಕ್ಕೆ ಭಾರೀ ಹೊಡೆತ ಬೀಳುತ್ತಿದೆ ಎಂದು ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಆದರೆ ಸಾರ್ವಜನಿಕರ ತುರ್ತು ಆರೋಗ್ಯ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಅಪೋಲೋ ಫಾರ್ಮಸಿ, ಮೆಡ್‌ಪ್ಲಸ್ ಮೆಡಿಕಲ್‌, ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆಯ ಮೆಡಿಕಲ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು.

ಬಂದ್ ಹಿನ್ನೆಲೆಯಲ್ಲಿ ಕೆಲವೆಡೆ ಸಾರ್ವಜನಿಕರು ಔಷಧ ಖರೀದಿಗೆ ಪರದಾಡಿದ ದೃಶ್ಯಗಳು ಕಂಡುಬಂದವು. ಆದರೂ ತುರ್ತು ಸೇವೆಗಳಿಗಾಗಿ ಕೆಲವು ಪ್ರಮುಖ ಮೆಡಿಕಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles