Thursday, July 16, 2026

spot_img

ಆರು ತಿಂಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..

ಉಡುಪಿ : ಕೊಲೆಯತ್ನ, ಕಳ್ಳತನ ಹಾಗೂ ಎನ್‌ಡಿಪಿಎಸ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಹಾಗೂ ಕಳೆದ ಆರು ತಿಂಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪ್ರಸಾದ್/ ರಬಡ (22)ನನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಸಾದ್, ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಗ್ರಾಮದ ಕರ್ಕಿ ಗುಡ್ಡೆ ನಿವಾಸಿ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಲ್ಕು, ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಕೊಲೆಯತ್ನ, ಕಳ್ಳತನ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಬಂಧ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು.

ಇದಲ್ಲದೆ, 2026ರ ಫೆಬ್ರವರಿಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣದಲ್ಲಿ ಆರೋಪಿ ಸುಮಾರು ಆರು ತಿಂಗಳಿಂದ ತಲೆಮರೆಸಿಕೊಂಡಿದ್ದನು. ಜುಲೈ 16ರಂದು ಮುಂಜಾನೆ ಆರೋಪಿ ಭಟ್ಕಳದಲ್ಲಿ ಇರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕರಾದ ನಿರಂಜನ್ ಗೌಡ ಹಾಗೂ ಚಂದ್ರಕಲಾ ಎಂ. ಪತ್ತಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿಗಳಾದ ಶ್ರೀಧರ್ ಪಾಟೀಲ್ ಮತ್ತು ಕಿರಣ್ ಬಿ. ಪಾಟೀಲ್ ಅವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಆರೋಪಿಯನ್ನು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles