ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿಯ ಮೂರು ಠಾಣಾ ವ್ಯಾಪ್ತಿಗಳಲ್ಲಿನ ಶಾಲೆಗಳಿಗೆ ನವೆಂಬರ್ 28ರಂದು ಒಂದು ದಿನ ರಜೆ ಘೋಷಿಸಲಾಗಿದೆ.

ಉಡುಪಿ ನಗರ ಠಾಣೆ, ಮಲ್ಪೆ ಠಾಣೆ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಅನ್ವಯವಾಗುತ್ತದೆ.

ಪ್ರಧಾನಿ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ, ಜೊತೆಗೆ ಸುರಕ್ಷತಾ ಕ್ರಮಗಳು, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಅವರು ತಿಳಿಸಿದ್ದಾರೆ.



