ಉಡುಪಿ: ಬಂಧಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ‘ಗೆರಟೆ ಕರಕುಶಲ ವಸ್ತುಗಳ ಮತ್ತು ಅಲಂಕಾರಿಕ ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ತರಬೇತಿ’ ಕಾರ್ಯಕ್ರಮದ ಸಮಾರೋಪ ಸಮಾರಂಭ ನವೆಂಬರ್ 4ರಂದು ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 23ರಿಂದ 31ರವರೆಗೆ ತರಬೇತಿ ಆಯೋಜಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ 32 ಬಂಧಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್, ಭಾರತೀಯ ವಿಕಾಸ ಟ್ರಸ್ಟ್ನ ಹಿರಿಯ ಸಹಾಯಕ ಜಗದೀಶ ಪೈ, ಟ್ರಸ್ಟ್ನ ಮನೋಹರ್ ಕತಗೇರಿ ಹಾಗೂ ಪ್ರತಿಮಾ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಧೀಕ್ಷಕ ವಿಜಯಕುಮಾರ ಡಿ. ಚವ್ಹಾಣ, ಜೈಲರ್ಗಳಾದ ಡಿ.ಆರ್. ಕೊಣಿ ಮತ್ತು ಎಸ್.ಎ. ಶಿರೋಳ, ಸಹಾಯಕ ಜೈಲರ್ ಸಿದ್ದಪ್ಪ ಟಿ. ಕೋಣೆ ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.


