Friday, March 6, 2026

spot_img

ಉಡುಪಿ ಜಿಲ್ಲೆಗೆ 29 ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡಗಳು, 34.50 ಕೋಟಿ ರೂ ಮಂಜೂರು: ಸಂಸದ ಕೋಟ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಕ್ಷೇಮ ಯೋಜನೆಯಡಿ ಒಟ್ಟು 29 ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಪ್ರತಿ ಕಟ್ಟಡಕ್ಕೆ ಸುಮಾರು 65 ಲಕ್ಷ ರೂ ವೆಚ್ಚ ಮಂಜೂರಾಗಿದೆ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಯೋಜನೆಯಡಿ ಉಡುಪಿ ವಿಧಾನಸಭಾ ಕ್ಷೇತ್ರದ ನೀಡಂಬಳ್ಳಿ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ನಿಟ್ಟೆ ಪ್ರದೇಶಗಳಲ್ಲಿ ನಿರ್ಮಾಣಗೊಂಡ ಆರೋಗ್ಯ ಕೇಂದ್ರಗಳ ಕಾಮಗಾರಿಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕ ಸೇವೆಗೆ ಚಾಲನೆ ದೊರೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನುದಾನದಡಿ ಮಂಜೂರಾದ ಕಟ್ಟಡಗಳಲ್ಲಿ 17 ಉಪಕೇಂದ್ರಗಳ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮೂರು ಉಪಕೇಂದ್ರ ಕಟ್ಟಡಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಉಳಿದ ಏಳು ಉಪಕೇಂದ್ರಗಳ ಕಾಮಗಾರಿಗಳನ್ನು ಆರಂಭಿಸಲು ದಿನಾಂಕ ನಿಗದಿಪಡಿಸಲಾಗಿದೆ.

ಆಯುಷ್ಮಾನ್ ಆರೋಗ್ಯ ಕ್ಷೇಮ ಕೇಂದ್ರಗಳ ಅಭಿವೃದ್ಧಿಗಾಗಿ ಒಟ್ಟು 34.50 ಕೋಟಿ ರೂ ಅನುದಾನವನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಈ ಕಟ್ಟಡಗಳನ್ನು ಜನವಸತಿ ಪ್ರದೇಶಗಳಲ್ಲಿ ಹಾಗೂ ಬಡವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ನಿರ್ಮಿಸುವಂತೆ ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ ಎಂದು ಸಂಸದರು ತಿಳಿಸಿದ್ದಾರೆ. ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles