Monday, June 22, 2026

spot_img

ಉಡುಪಿ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಪೊಲೀಸ್ ತೀವ್ರ ಶೋಧ

ಉಡುಪಿ : ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಂಕೀರ್ಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಬೆದರಿಕೆ ಸಂದೇಶದ ಮಾಹಿತಿ ದೊರೆಯುತ್ತಿದ್ದಂತೆ ಉಡುಪಿ ನಗರ ಠಾಣೆ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನ್ಯಾಯಾಲಯ ಸಂಕೀರ್ಣದ ಸಂಪೂರ್ಣ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು.

ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಆವರಣದ ವಿವಿಧ ಕಟ್ಟಡಗಳು, ಕಚೇರಿಗಳು ಹಾಗೂ ಸಾರ್ವಜನಿಕರ ಸಂಚಾರ ಇರುವ ಪ್ರದೇಶಗಳಲ್ಲಿ ಸೂಕ್ಷ್ಮ ತಪಾಸಣೆ ನಡೆಸಲಾಗುತ್ತಿದೆ. ನ್ಯಾಯಾಲಯಕ್ಕೆ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕ ಮನೆ ಮಾಡಿತ್ತು.

ಬೆದರಿಕೆ ಇ-ಮೇಲ್‌ನ ಮೂಲ ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದು, ಇದು ನೈಜ ಬೆದರಿಕೆಯೋ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬ ಕುರಿತು ತನಿಖೆ ಮುಂದುವರಿದಿದೆ. ಈವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರುವ ಬಗ್ಗೆ ವರದಿಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles