Thursday, November 19, 2026

spot_img

ಉಡುಪಿ ಬನ್ನಂಜೆ ಬಸ್ ನಿಲ್ದಾಣದಿಂದ ಯುವತಿ ನಾಪತ್ತೆ

ಉಡುಪಿ : ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಗದ್ದೆಮನೆ ನಿವಾಸಿ ಸುಮಿತ್ರಾ (26) ಎಂಬ ಯುವತಿ ನ.13ರಂದು ಬೆಳಿಗ್ಗೆ 10 ಗಂಟೆಯಿಂದ ಉಡುಪಿ ಬನ್ನಂಜೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನಾಪತ್ತೆಯಾಗಿದ್ದಾರೆ.

ಸುಮಾರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹಾಗೂ ಕೋಲು ಮುಖ ಹೊಂದಿರುವ ಅವರು ಕನ್ನಡ, ತುಳು ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.

ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ (0820-2520444), ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ (0820-2526444), ಪೊಲೀಸ್ ನಿರೀಕ್ಷಕರು (9480805408) ಅಥವಾ ಉಪನಿರೀಕ್ಷಕರು (9080805445) ಅವರನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles