Wednesday, March 4, 2026

spot_img

ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.
ಸ್ಪರ್ಧೆಗಳ ವಿವರ:
ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡು
ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4100 ಮೀ. ರಿಲೇ, 4400 ಮೀ ರಿಲೇ), ಗುಂಪು
ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್ ಹಾಗೂ ಥ್ರೋಬಾಲ್ ಪಂದ್ಯಗಳು ನಡೆಯಲಿವೆ. (ಫುಟ್ಬಾಲ್ ಸ್ಪರ್ಧೆಯು
ಬ್ರಹ್ಮಾವರದ ಎಸ್.ಎಂ.ಎಸ್ ಪಿ.ಯು ಕಾಲೇಜಿನಲ್ಲಿ ಆಗಸ್ಟ್ 24 ರಂದು ನಡೆಯಲಿದ್ದು, ಭಾಗವಹಿಸುವ ತಂಡಗಳು ಅಂದು ಬೆಳಗ್ಗೆ 9
ಗಂಟೆಗೆ ವದರಿ ಮಾಡಿಕೊಳ್ಳಬಹುದಾಗಿದೆ).
ಮಹಿಳೆಯರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡು
ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4100 ಮೀ. ರಿಲೇ, 4400 ಮೀ ರಿಲೇ), ಗುಂಪು
ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಪಂದ್ಯಗಳು ನಡೆಯಲಿವೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ
ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ ಮೊ.ನಂ: 9880655125 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles