ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ನೂರಾರು ರೈಲ್ವೇ ಮೇಲ್ಸೇತುವೆಗಳಿಗಾಗಿ, ಸರಿಸುಮಾರು 1,76,525 ರೂ.ಗಳನ್ನು ವಿನಿಯೋಗಿಸಲಾಗಿದೆ. ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ 6 ಸಾವಿರ ಕಿ.ಮೀ.ಇದ್ದ ರಾ.ಹೆ.ಗಳನ್ನು 10 ಸಾವಿರ ಕಿ.ಮೀ.ಗೆ ವಿಸ್ತರಿಸಲಾಗಿದೆ. 354 ಯೋಜನೆಗಳು ನಡೆಯುತ್ತಿದ್ದು, ಹಂತಹಂತವಾಗಿ ಪೂರ್ಣಗೊಳ್ಳಲಿದೆ. 5 ಸಾವಿರ ಕಿ.ಮೀ.ಗೆ 47.43 ಸಾವಿರ ಕೋ.ರೂ.ವೆಚ್ಚವಾಗಿದೆ. ಕರಾವಳಿ ಭಾಗದಲ್ಲಿ 10 ಸಾವಿರ ಕೋ.ರೂ.ಗೂ ಅಧಿಕ ಕಾಮಗಾರಿಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಅವರು ಉಡುಪಿ ರಾಷ್ಟ್ರೀಯ ಹೆದ್ದಾರಿ.169 ಎ ಉಡುಪಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆಯನ್ನು ಭಾನುವಾರದಂದು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತಾವಿಸಿದರು. ನಗರಸಭೆ ವತಿಯಿಂದ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸಮ್ಮಾನಿಸಲಾಯಿತು. ಶಾಸಕರಾದ ಶಾಸಕ ಯಶ್‌ಪಾಲ್ ಎ.ಸುವರ್ಣ, ವಿ.ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಎ.ಕಿರಣ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾ.ಹೆ.ಅಧಿಕಾರಿಗಳಾದ ಎಂ.ಕಿರಣ್, ಲೋಕೇಶ್, ಪ್ರಮುಖರಾದ ದಿನೇಶ್ ಅಮೀನ್ ಉಪಸ್ಥಿತರಿದ್ದರು.

ನಗರಸಭೆ ಸದಸ್ಯರಾದ ಗಿರೀಶ್ ಅಂಚನ್ ಸ್ವಾಗತಿಸಿ, ಅಶೋಕ್ ನಾಯ್ಕ್ ವಂದಿಸಿದರು. ಸತೀಶ್ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು.


