Sunday, April 26, 2026

spot_img

ಉಡುಪಿ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಅಗ್ನಿ ಅವಘಡ – ಅಂಗಡಿಗಳು ಭಸ್ಮ

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ.

ಕಟ್ಟಡದಲ್ಲಿದ್ದ ಮೊಬೈಲ್ ಅಂಗಡಿ ಹಾಗೂ ಹಾರ್ಡ್‌ವೇರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಜ್ವಾಲೆಗಳು ವ್ಯಾಪಿಸಿ ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಿಂದ ವ್ಯಾಪಾರಿಗಳಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡದ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತೀವ್ರ ಪ್ರಯತ್ನದ ಮೂಲಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸಮಯೋಚಿತ ಕ್ರಮದಿಂದ ಬೆಂಕಿ ಇನ್ನಷ್ಟು ವ್ಯಾಪಿಸುವುದನ್ನು ತಡೆಯಲಾಗಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಾಥಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಘಟನೆಯ ಕುರಿತು ತನಿಖೆ ಮುಂದುವರಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles