Thursday, August 20, 2026

spot_img

ಉಪ್ಪೂರಿನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ; ಏಳು ಪ್ರಯಾಣಿಕರು ಪಾರು

ಉಡುಪಿ: ಬ್ರಹ್ಮಾವರ ಸಮೀಪದ ಉಪ್ಪೂರಿನಲ್ಲಿ ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ನಡೆದಿದೆ.

ಬಸ್ಸಿನಲ್ಲಿ ಏಳು ಮಂದಿ ಪ್ರಯಾಣಿಕರಿದ್ದು, ಪ್ರಯಾಣದ ವೇಳೆ ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆಯೇ ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ.

ಪ್ರಯಾಣಿಕರು ಬಸ್ಸಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ಪಡೆದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆದರೆ ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles