Wednesday, February 25, 2026

spot_img

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ..

ಉಡುಪಿ: ಉಡುಪಿಯ ಎಂ.ಜಿ.ಎಂ. ಸಂಧ್ಯಾ ಕಾಲೇಜು ಹಾಗೂ ಐಸಿಎಐ ಉಡುಪಿ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣೆ” ವಿಷಯದ ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಚಾರ್ಟರ್ಡ್ ಅಕೌಂಟೆಂಟ್ ವೆಂಕಟರಮಣ ಕಾಮತ್ ಭಾಗವಹಿಸಿ, ಇತ್ತೀಚಿನ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು, ತೆರಿಗೆ ವ್ಯವಸ್ಥೆಯ ಬದಲಾವಣೆಗಳು, ಆರ್ಥಿಕ ಬೆಳವಣಿಗೆ ಮೇಲಿನ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯ ಯೋಜನೆಗಳಲ್ಲಿ ಬಜೆಟ್‌ನ ಪಾತ್ರದ ಕುರಿತು ವಿವರಿಸಿದರು. ಬಜೆಟ್ ದೇಶದ ಆರ್ಥಿಕ ದಿಕ್ಕನ್ನು ನಿರ್ಧರಿಸುವ ಮಹತ್ವದ ದಾಖಲೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನ ಹಾಗೂ ವಿಶ್ಲೇಷಣಾ ಸಾಮರ್ಥ್ಯವನ್ನು ವೃದ್ಧಿಸಲು ಸಹಕಾರಿ ಎಂದರು.

ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಐಸಿಎಐ ಉಡುಪಿ ಶಾಖೆಯ ಎಸ್‌ಐಸಿಎಎಸ್‌ಎ ಅಧ್ಯಕ್ಷರಾದ ಮಾಧುರಿ ಪ್ರಭು ಅತಿಥಿಗಳನ್ನು ಸ್ವಾಗತಿಸಿದರು. ಎಸ್‌ಐಸಿಎಎಸ್‌ಎ  ಕಾರ್ಯದರ್ಶಿ ಚಂದ್ರ ಎಸ್. ಕಾರ್ಯಕ್ರಮ ನಿರೂಪಿಸಿದರು. ಎಸ್‌ಐಸಿಎಎಸ್‌ಎ ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ ನೀಡಿದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕು. ಕಾವ್ಯಶ್ರೀ ಧನ್ಯವಾದಗೈದರು.

ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ವಿಚಾರ ಸಂಕಿರಣ ಚರ್ಚಾತ್ಮಕವಾಗಿ ನಡೆದಿದ್ದು, ಬಜೆಟ್ ಕುರಿತು ಸ್ಪಷ್ಟ ಅರಿವು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles