ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 3,23,100 ರೂಪಾಯಿ ಮೌಲ್ಯದ ಎಂ.ಡಿ.ಎಂ.ಎ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಪೊಲೀಸ್ ರು ಶಿವಳ್ಳಿ ಗ್ರಾಮದ ಕರಂಬಳ್ಳಿ ರಾಮಬೆಟ್ಟು ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವ ಸಂದರ್ಭ ಆಟೋರಿಕ್ಷಾದಲ್ಲಿ ಎಂ.ಡಿ.ಎಂ.ಎ ಮಾರಾಟಕ್ಕೆ ಯತ್ನಿಸುತ್ತಿದ್ದ ಅಬ್ದುಲ್ ರೌಫ್ (26) ಎಂಬಾತನನ್ನು ಬಂಧಿಸಲಾಯಿತು.

ಆರೋಪಿಯಿಂದ ಅಂದಾಜು 15,000 ರೂಪಾಯಿ ಮೌಲ್ಯದ 7.59 ಗ್ರಾಂ ತೂಕದ ಎಂ.ಡಿ.ಎಂ.ಎ, ಮಾದಕ ವಸ್ತು ಮಾರಾಟದಿಂದ ಗಳಿಸಿದ 3,100 ರೂಪಾಯಿ ನಗದು ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ 3.23 ಲಕ್ಷ ರೂಪಾಯಿ ಆಗಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.



