Sunday, October 18, 2026

spot_img

ಎನ್‌ಎಸ್‌ಎಸ್ ಶಿಬಿರದಲ್ಲಿ 10 ಕ್ವಿಂಟಾಲ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ

ಉಡುಪಿ : ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವಾರ್ಷಿಕ ವಿಶೇಷ ಶಿಬಿರವು ಕಾಪುವಿನ ಮಹಾದೇವಿ ಪ್ರೌಢಶಾಲೆಯಲ್ಲಿ ಸಂಪನ್ನಗೊಂಡಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದ್ದು, ಏಳು ದಿನಗಳ ಕಾಲ ವಿವಿಧ ಚಟುವಟಿಕೆಗಳೊಂದಿಗೆ ಶಿಬಿರ ನಡೆಯಿತು.

ಶಿಬಿರದಲ್ಲಿ ಭಾಗವಹಿಸಿದ 50 ವಿದ್ಯಾರ್ಥಿಗಳು, ಶಿಬಿರಾಧಿಕಾರಿ ಪರಮೇಶ್ವರ್ ಎಂ. ಮೊಗವೀರ ಅವರ ನೇತೃತ್ವದಲ್ಲಿ ಕಾಪು ಬೀಚ್ ಹಾಗೂ ಕಾಪು ಪಟ್ಟಣದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಸುಮಾರು 10 ಕ್ವಿಂಟಾಲ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಯೋಗ, ಕಾನೂನು ಮತ್ತು ಪರಿಸರ ಜಾಗೃತಿಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳನ್ನು ಶಿಬಿರದಲ್ಲಿ ಆಯೋಜಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ವಿದ್ಯಾರ್ಥಿಗಳು ಕೈಗೊಂಡ ಶ್ರಮದಾನ ಕಾರ್ಯವನ್ನು ಶ್ಲಾಘಿಸಿದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗರಾಜ, ಕಾಪು ಬೀಚ್ ಫ್ರೆಂಡ್ಸ್ ಅಧ್ಯಕ್ಷ ಚಂದ್ರಶೇಖರ, ಮಾಧವ ಪಾಲನ್, ಮಮತಾ ಶೆಟ್ಟಿ, ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಶಿಬಿರಾಧಿಕಾರಿ ಪರಮೇಶ್ವರ್ ಎಂ. ಮೊಗವೀರ, ಲಕ್ಷ್ಮೀಕಾಂತ್, ಮಧುಕರ್ ಅಂಚನ್, ಕಾಲೇಜಿನ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಕುಮಾರಿ ಸುಮಾ ಪ್ರಾರ್ಥಿಸಿದರು. ಪರಮೇಶ್ವರ್ ಮೊಗವೀರ ಸ್ವಾಗತಿಸಿ, ಶಿಬಿರದ ವರದಿ ವಾಚಿಸಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀಕಾಂತ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles