ಉಡುಪಿ : ಕೇಂದ್ರ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲ್ ಹಾಗೂ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

8ನೇ ತರಗತಿಯ ವಿನೀಶ್ ಆಚಾರ್ಯ, 6ನೇ ತರಗತಿಯ ಪ್ರಣಮ್ಯಾ ಆಚಾರ್ಯ ಹಾಗೂ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ಸಾನಿಧ್ಯ ಆಚಾರ್ಯ ಅವರು ಸ್ಪರ್ಧೆಯಲ್ಲಿ ಮಿಂಚಿದ್ದು, ಮುಂದಿನ ಹಂತಕ್ಕೆ ಅರ್ಹರಾಗಿದ್ದಾರೆ.

ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಮತ್ತು ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.



