ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಕಾರ್ಯಾಲಯದಲ್ಲಿ ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿಯ ಪೂರ್ವಭಾವಿ ಸಭೆ ನಡೆಯಿತು. ಧರಣಿ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಜುಲೈ 28 ರಂದು ಜಿಲ್ಲಾ ಮಟ್ಟದ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಯಲ್ಲಿದ್ದು, ಜಿಲ್ಲೆಯಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡುವ ಮೂಲಕ ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ಸರಕಾರದ ಕಣ್ಣು ತೆರೆಸುವ ಕೆಲಸ ಆಗಬೇಕಾಗಿದ್ದು ನಮುನೆ 9/11 ಇದರ ಅಧಿಕಾರ ಈ ಹಿಂದೆ ಇದ್ದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ನೀಡುವ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪಕ್ಷದ ಎಲ್ಲ ಪದಾಧಿಕಾರಿಗಳು ಅಣಿಯಾಗ ಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು. ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಅವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಏಕ ವಿನ್ಯಾಸ ನಕ್ಷೆಯ ಸಮಸ್ತ ನಾಗರಿಕರು ಕೂಡ ಭಾಗವಹಿಸಿ ಪ್ರತಿಭಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಗಿರೀಶ್ ಅಂಚನ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಶೆಣೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಉಪಸ್ಥಿತರಿದ್ದರು. ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲದ ಪದಾಧಿಕಾರಿಗಳು ಹಾಗೂ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.