ಉಡುಪಿ : ಯಕ್ಷಗಾನ ಕಲಾರಂಗದಲ್ಲಿ ಏಳು ವರ್ಷಗಳ ಕಾಲ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಿದ, ಡಾ. ತಲ್ಲೂರು ಶಿವರಾಮ ಶೆಟ್ಟರು ಸಾರ್ಥಕ 75ಸಂವತ್ಸರಗಳನ್ನು ಅರ್ಥಪೂರ್ಣವಾಗಿ ಪೂರೈಸಿದ ಸಂದರ್ಭದಲ್ಲಿ, ಅವರ ಮನೆಗೆ ಯಕ್ಷಗಾನ ಕಲಾರಂಗದ ಕಾರ್ಯಕರ್ತರು ತೆರಳಿ, ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ಶ್ರೀಮತಿ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ದಂಪತಿಗಳನ್ನು ಗೌರವಿಸಿದರು.

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಶಾಲು, ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎಸ್. ವಿ. ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಜತೆಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ವಿದ್ಯಾಪ್ರಸಾದ್, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಯು. ಎಸ್. ರಾಜಗೋಪಾಲ ಆಚಾರ್ಯ, ವಿಜಯಕುಮಾರ್ ಮುದ್ರಾಡಿ, ಕಿಶೋರ್ ಸಿ. ಉದ್ಯಾವರ, ಕೆ. ಆನಂದ ಶೆಟ್ಟಿ, ಎ. ನಟರಾಜ ಉಪಾಧ್ಯ, ಡಾ. ರಾಜೇಶ್ ನಾವಡ, ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು.
