Thursday, October 23, 2025

spot_img

ಒತ್ತಾಯ ಪೂರ್ವಕ ಹಿಂದಿ ಹೇರಿಕೆ, ಕರವೇ ಕಾರ್ಯಕರ್ತರನ್ನು ಬಂಧನ: ಉಡುಪಿ ಕರವೇ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ರಾಜಾಭಾಷಾ ಆಯೋಗ- ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ ಭಾಷೆಗಳು, ಜನರ ಭಾಷೆಗಳು. ರಾಜಭಾಷೆ ಎಂಬುದೇ ಪ್ರಜಾಪ್ರಭುತ್ವ ವಿರೋಧಿ. ಹೀಗಾಗಿ ಒಕ್ಕೂಟ ಸರ್ಕಾರ ರಾಜಭಾಷಾ ಸಮಿತಿ/ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಾವು ಸಹಿಸುವುದಿಲ್ಲ. ಹಿಂದಿಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

 ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷ ಅನಿಲ್ ಪೂಜಾರಿ, ಅಜರುದ್ದಿನ್, ಜಿಲ್ಲಾ ಸಂಚಾಲಕರಾದ ಕೃಷ್ಣಪಂಗಾಳ, ಜಿಲ್ಲಾ ಸಂಚಾಲಕರಾದ ಸುಧಾಕರ್ ಕಲ್ಮಾಡಿ, ಕಾಪು ತಾಲೂಕು ಅಧ್ಯಕ್ಷ ವೀರೇಶ್, ಕಾರ್ಕಳ ತಾಲೂಕು ಅಧ್ಯಕ್ಷ ಇಮ್ರಾನ್ ಶೇಕ್, ಕುಂದಾಪುರ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles