Monday, March 2, 2026

spot_img

ಕಟಪಾಡಿ ಓವರ್‌ಪಾಸ್ ಕಾಮಗಾರಿ ಹಿನ್ನೆಲೆ ಬದಲಿ ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ ವ್ಯವಸ್ಥೆ ಮಾಡಿ: ಡಿಸಿ ಸ್ವರೂಪ ಟಿ.ಕೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ–66ರ ಕಟಪಾಡಿ ಜಂಕ್ಷನ್‌ನಲ್ಲಿ ವೆಹಿಕಲ್ ಓವರ್‌ಪಾಸ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಟಪಾಡಿ ಜಂಕ್ಷನ್ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಟಪಾಡಿ ಜಂಕ್ಷನ್‌ನಲ್ಲಿ ಓವರ್‌ಪಾಸ್ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಪರ್ಯಾಯ ಮಾರ್ಗಗಳನ್ನು ಸೂಚಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ವಾಹನಗಳು ಸಂಚರಿಸುತ್ತಿದ್ದರೂ, ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಭಾರೀ ವಾಹನಗಳ ಸಂಚಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರಿಂದ ಬಂದಿವೆ. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

 ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಮುಖಂಡ ವಿನಯ್ ಕುಮಾರ್ ಸೊರಕೆ, ಓವರ್‌ಪಾಸ್ ಕಾಮಗಾರಿ ಆರಂಭಿಸುವ ಮೊದಲು ಸ್ಥಳೀಯ ಏಳು ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳ ವಿಶ್ವಾಸ ಪಡೆದು ಬದಲಿ ಮಾರ್ಗಗಳ ವ್ಯವಸ್ಥೆ ರೂಪಿಸಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.  

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಉಪ ಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಸ್ಥಳೀಯ ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳು, ತಾಲೂಕು ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಅಭಿಯಂತರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles