ಉಡುಪಿ : ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಟ ಧ್ರುವ ಸರ್ಜಾ ಜೊತೆಗೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕ ಸಮೃದ್ಧಿ ವಿ ಮಂಜುನಾಥ್, ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ ಶ್ರೀನಿವಾಸ್ ರಾಜು, ನಟಿ ದೇವಿಕಾ ರಾಣಿ, ಡೆಕ್ಕನ್ ಸಮೂಹ ಸಂಸ್ಥೆ ಮಾಲಕ ಶಶಿಕಾಂತ್, ಟ್ರಾವೆಲ್ ಮಾರ್ಟ್ ಸಂಸ್ಥೆ ಮಾಲಕ ಮೋಹನ್ ಸುಂದರ್ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮಕ್ಷಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಶರನ್ನವರಾತ್ರಿ ಸಂದರ್ಭದಲ್ಲಿ ನವದುರ್ಗಾ ಲೇಖನವನ್ನು ಬರೆಯಲು ದೇವಳದ ಮುಂಭಾಗದಲ್ಲಿರುವ ನವದುರ್ಗಾ ಲೇಖನ ಮಂಟಪವನ್ನು ಉದ್ಘಾಟಿಸಲಾಗಿದ್ದು ನಟ ಧ್ರುವ ಸರ್ಜಾ ಸಹಿತ ಎಲ್ಲರೂ ಒಂದು ದಿನದ ನವದುರ್ಗಾ ಲೇಖನವನ್ನು ಬರೆದರು.

ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಆರ್ಥಿಕ ಸಮಿತಿಯ ಸಂಚಾಲಕ ಸುನಿಲ್ ಎಸ್. ಪೂಜಾರಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.