Wednesday, March 4, 2026

spot_img

ಕರಾವಳಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಇಂಬು ನೀಡಿದ ರಾಜ್ಯ ಸರ್ಕಾರ : ಎಂ.ಎ ಗಫೂರ್

ಉಡುಪಿ : ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.

 ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ. ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.

  ಸಭೆಯಲ್ಲಿ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಕಾರ್ಯದರ್ಶಿ ಪ್ರದೀಪ್ ಡಿ ಸೋಜಾ, ಸಮಿತಿಯ ಸದಸ್ಯ ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರಸ್ತುತ ಸಾಲಿನಲ್ಲಿ ಆಯವ್ಯಯದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 1050 ಲಕ್ಷ ರೂ. ಮೊತ್ತದ ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಾರ್ಷಿಕ ಸಾಲಿನ ಕ್ರಿಯಾ ಯೋಜನೆಯಲ್ಲಿ 1082.55 ಲಕ್ಷ ರೂ. ಮೊತ್ತದ ಒಟ್ಟು 153 ಅಭಿವೃದ್ಧಿ ಕಾಮಗಾರಿಗಳನ್ನು ಕ್ರಿಯಾ  ಯೋಜನೆಯಲ್ಲಿ ಅನುಮೋದಿಸಲಾಗಿದೆ.

ಎಂ.ಎ ಗಫೂರ್,  ಅಧ್ಯಕ್ಷ  ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles