ಉಡುಪಿ: ಪೆರ್ಡೂರು ಗ್ರಾಮದ ದೇವಸ್ಥಾನದ ಎದುರು ಗದ್ದೆಯ ಜಾಗದಲ್ಲಿದ್ದ ಕರುವನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಕಳವು ಮಾಡಿ ಸಾಗಿಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಫೆ.17ರಂದು ರಾತ್ರಿ ಸುಮಾರು 10.30ರ ವೇಳೆಗೆ ಆರೋಪಿತರಾದ ರಾಘವೇಂದ್ರ ಹಾಗೂ ಸುಧೀಂದ್ರ ಶೆಟ್ಟಿ ಅಲಿಯಾಸ್ ಬಾಬು ಅವರು ಆಟೋ ರಿಕ್ಷಾದಲ್ಲಿ ಕರುವನ್ನು ಸಾಗಿಸಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಬ್ರಹ್ಮಾವರ ಪೊಲೀಸ್ ರ ತಂಡ ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



