ಉಡುಪಿ : ಪರೀಕ್ಷಾ ಸಮಯದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಹಲವು ಸಂಘಟನೆ ಗಳು ಕರೆದಿರುವ 22 ರ ಶನಿವಾರದ ಕರ್ನಾಟಕ ಬಂದ್ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಬಲವಿಲ್ಲ.ಎಂದು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಶುಕ್ರವಾರ ದಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಕಛೇರಿಯಲ್ಲಿ ಕರವೇ ಉಡುಪಿ ಜಿಲ್ಲೆ ಅಧ್ಯಕ್ಷರಾದ ಸುಜಯ್ ಪೂಜಾರಿಯ ರವರು ಇಡೀ ಉಡುಪಿ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಬೆಂಬಲವನ್ನು ನೀಡುವುದಿಲ್ಲ ಎಂದು ಅವರು ಮಾತನಾಡಿದರು. ನಮ್ಮ ನಾಡಿನ ನೆಲ ಜಲ ಭಾಷೆಯ ಹಿತ ಕಾಪಾಡುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಾ ಹೋರಾಟದ ಮಂಚೂಣಿಯಲ್ಲಿದ್ದು ಬೆಳಗಾವಿಗೆ ಹೋಗಿ ಸರಿಪಡಿಸಿದ್ದಾರೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು. ಅವರ ನೇತೃತ್ವದಲ್ಲಿ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದೆ. ಹಿಂದೂ ಎಸ್ ಎಲ್ ಸಿ ಪರೀಕ್ಷೆ ಇರುತ್ತದೆ ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯ ವಾದ್ದರಿಂದ ಬಂದ್ ಮಾಡುವುದರಿಂದ ಅನೇಕ ರೀತಿಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸುವುದಿಲ್ಲ. ಎಂದು ಉಡುಪಿ ಜಿಲ್ಲೆಯ ಕರ್ನಾಟಕ ರಕ್ಷಣಾವೇದಿಕೆ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.