Saturday, June 28, 2025

spot_img

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

ಉಡುಪಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ಕೈಗೊಂಡ ಮುಷ್ಕರದ ಯಾವುದೇ ಬೇಡಿಕೆಗಳನ್ನು ಈಡೇರಿಸದ ಕಾರಣ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಇಂದಿನಿಂದ ಉಡುಪಿ ತಾಲೂಕು ಕಚೇರಿ ಎದುರು ಪ್ರಾರಂಭವಾಗಿದೆ.

ಚಿತ್ರದುರ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು. ತಾಲ್ಲೂಕು ಅಧ್ಯಕ್ಷರು. ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತ ಈ ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು.

ಹೀಗಾಗಿ ನಾವು ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆದಿದ್ದೇವು. ತದನಂತರ ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ. ಆದ್ದರಿಂದ ಯಾವುದೇ ಬೇಡಿಕೆಗಳ ಈಡೇರಿಕೆ ಹಿನ್ನಲೆಯಲ್ಲಿ ಮತ್ತ ಇಂದಿನಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿಗೆ ತೀರ್ಮಾನಿಸಿದೆ. ಸದ್ಯ ಉಡುಪಿ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಕೆಲಸಗಳನ್ನು ಸ್ಥಗಿತಗೊಳಿಸಿ ಉಡುಪಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಮುಂದುವರಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles