ಉಡುಪಿ: ಯಕ್ಷಗಾನ ಕಲಾರಂಗವು ಕಲೆ, ಕಲಾವಿದರು, ಯಕ್ಷಶಿಕ್ಷಣ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೀಡುತ್ತಿರುವ ಕೊಡುಗೆ ಅನನ್ಯ ಮತ್ತು ಶ್ಲಾಘನೀಯವಾಗಿದೆ ಎಂದು ಜಾನಪದ ವಿದ್ವಾಂಸ ಕೆ. ಎಲ್. ಕುಂಡಂತಾಯ ಎಂದರು.

ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಸಹಯೋಗದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ ನಾಲ್ಕು ದಿನಗಳ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಳದ ಅಧ್ಯಕ್ಷ ಗಿರಿಧರ ಸುವರ್ಣ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಿ.ಜಿ. ಶೆಟ್ಟಿ, ಸದಸ್ಯರು ನಟರಾಜ ಉಪಾಧ್ಯಾಯ ಮತ್ತು ಡಾ. ರಾಘವೇಂದ್ರ ರಾವ್ ಉಪಸ್ಥಿತರಿದ್ದರು.

ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳಾದ ನಿವೇದಿತಾ, ಶಮಿಕಾ, ರಿಶಾ ಮತ್ತು ಸ್ಪಂದನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದನಾ ಪ್ರಸ್ತುತಪಡಿಸಿದರು. ಈ ಸಂದರ್ಭದಲ್ಲಿ ಗಣಪತಿ ಪ್ರೌಢಶಾಲೆ, ಪಡುಬಿದ್ರೆ ವಿದ್ಯಾರ್ಥಿಗಳಿಂದ ಗುರು ದಕ್ಷಿಣೆ ಹಾಗೂ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಉಚ್ಚಿಲ ವಿದ್ಯಾರ್ಥಿಗಳಿಂದ“ಶೂರ್ಪನಖಾ ನಾಸಾಚ್ಛೇದ ಜಟಾಯು ಮೋಕ್ಷ ಪ್ರಸಂಗಗಳು ಪ್ರದರ್ಶಿಸಲ್ಪಟ್ಟು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.



