Saturday, June 28, 2025

spot_img

ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

ಉಡುಪಿ : ಗುಂಪುಗಾರಿಕೆ ಮಾಡಿದ ಹೀರೋಗಳು ಜೀರೋ ಆಗಿದ್ದಾರೆ. ಜಾತಿ ರಾಜಕಾರಣ ಗುಂಪುಗಾರಿಕೆ ಅಲ್ಲ ಬಿಟ್ಟುಬಿಡಿ ಎಂದು ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅವರು ಡಿಸಿಎಂ ಆದ ನಂತರದ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಜಾತಿ ಮೇಲೆ ರಾಜಕಾರಣ ಮಾಡೋದನ್ನು ಬಿಟ್ ಬಿಡಿ ಎಲ್ಲರೂ ಒಂದಾಗಿ ಕೆಲಸ ಮಾಡಿ ಎಂದು ಚಾಟಿಬೀಸಿದ್ದಾರೆ. ಉಡುಪಿಯಲ್ಲಿ 5ಕ್ಕೆ ಐದು ಸೋಲಿಗೆ ಕಾರಣ ಏನು? ಡಿಕೆ ಶಿವಕುಮಾರ್ ಬಣ ಅಥವಾ ಇನ್ಯಾವುದೋ ನಾಯಕರ ಬಣ ಮಾಡಬೇಡಿ. ಎಲ್ಲರದ್ದೂ ಒಂದೇ ಬಣ ಅದು ಕಾಂಗ್ರೆಸ್ ಬಣ. ಜಿಲ್ಲಾ ಕಾಂಗ್ರೆಸ್ ಮುಂದಿನ ಮೂರು ತಿಂಗಳಲ್ಲಿ ಎಲ್ಲ ಸರಿ ಆಗಬೇಕು. ಪಕ್ಷ ಸಂಘಟನೆ ಮಾಡಬೇಕು ಇಲ್ಲವಾದರೆ ಎಲ್ಲವನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ಜಯಪ್ರಕಾಶ್ ಹೆಗ್ಡೆ, ಐವಾನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles