ಉಡುಪಿ: ತಡರಾತ್ರಿ ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಯುವಕನೋರ್ವನಿಗೆ ಯಾವುದೇ ವಾಹನ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು, ಯುವಕ ದೇಹ ಸಂಪೂರ್ಣ ಛಿದ್ರ ಛಿದ್ರವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನೂಶ್ ಭಂಡಾರಿ ( 21) ಸ್ಥಳದಲ್ಲೇ ಸಾವನ್ನಪ್ಪಿದ ಯುವಕ.

ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನುಷ್ ಭಂಡಾರಿ, ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ವಾಹನ ಢಿಕ್ಕಿ ಹೊಡೆದ ಬಳಿಕ ರಸ್ತೆ ಬಿದ್ದ ಅನೂಶ್ ಮೇಲೆ ಬೇರೆ ಬೇರೆ ವಾಹನಗಳು ಚಲಿಸಿಕೊಂಡ ಹೋದ ಹಿನ್ನಲೆಯಲ್ಲಿ ಮೃತ ದೇಹ ಸಂಪೂರ್ಣ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಉಡುಪಿಯ ಸಂತೆಕಟ್ಟೆ ನಿವಾಸಿಯಾಗಿದ್ದ ಅನೂಶ್, ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಆರು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


