ಉಡುಪಿ: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು.

ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದೇವಸ್ಥಾನದ ಸುತ್ತ ಮುತ್ತಲಿನ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸ್ವಚ್ಛ ಮತ್ತು ಸುಂದರೀಕರಣಗೊಳಿಸುವ ಬಗ್ಗೆ ಮತ್ತು ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಉಪಾಧ್ಯಕ್ಷರಾದ ಕೆ. ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.