ಕಾಪು : ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು ಅನುಗ್ರಹ ಪ್ರಸಾದ ಸ್ವೀಕರಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರ ಕಾಮಗಾರಿಗಳು ನಡೆದು ಬಂದ ಹಾದಿಯನ್ನು ವಿವರಿಸಿದರು.
ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್., ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಕಾರ್ಯನಿರ್ವಹಣಾಽಕಾರಿ ರವಿಕರಣ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಉಪಾಧ್ಯಕ್ಷ ಮಾಧವ ಆರ್. ಪಾಲನ್, ನವದುರ್ಗಾ ಲೇಖನ ಯಜ್ಣ ಸಮಿತಿ ಕಾರ್ಯಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ರಘುರಾಮ ಶೆಟ್ಟಿ, ಸಾವಿತ್ರಿ ಗಣೇಶ್, ಪಶುಸಂಗೋಪನಾ ಇಲಾಖೆಯ ನಿರ್ದೇಶಕ ಡಾ| ಮಂಜುನಾಥ್ ಪಾಳೇಗಾರ, ಪಿಲಿಕುಳ ಅಭಿವೃದ್ಧಿ ಪ್ರಾಽಕಾರದ ಆಯುಕ್ತ ಡಾ| ಅರುಣ್ ಕುಮಾರ್ ಶೆಟ್ಟಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ರೆಡ್ಡಪ್ಪ, ಭಾರತೀಯ ವೈದ್ಯಕೀಯ ಪರಿಷತ್‌ನ ಸದಸ್ಯ ಡಾ| ಸುಶಾಂತ್ ರೈ, ಡಾ| ಅರುಣ್ ಹೆಗ್ಡೆ ಶಿರ್ವ, ಡಾ| ಸಂದೀಪ್ ಶೆಟ್ಟಿ ಉದ್ಯಾವರ ಉಪಸ್ಥಿತರಿದ್ದರು.