ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ಆಗಿದ್ದ ರಾಕೇಶ್ ಉಡುಪಿಯ ಮಲ್ಪೆ ಮೂಲದವರು. ನಿನ್ನೆ ನಿಟ್ಟೆಯಲ್ಲಿ ಗೆಳೆಯ ಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ರಾಕೇಶ್, ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.