Wednesday, April 29, 2026

spot_img

ಕಾರಂತರ ಕಾದಂಬರಿಗಳಲ್ಲಿ ಸಂವಿಧಾನದ ಆಶಯಗಳು ಪ್ರತಿಫಲಿತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

ಉಡುಪಿ : ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು, ಶೋಷಣೆಯ ವಿರುದ್ಧ ಹಕ್ಕು, ಸಾಮಾಜಿಕ ನ್ಯಾಯ ಹಾಗೂ ಪರಿಸರ ಸಂರಕ್ಷಣೆ ಮೊದಲಾದ ವಿಷಯಗಳನ್ನು ಡಾ. ಶಿವರಾಮ ಕಾರಂತರು ತಮ್ಮ ಕಾದಂಬರಿಗಳ ಮೂಲಕ ಪರಿಣಾಮಕಾರಿಯಾಗಿ ವ್ಯಕ್ತಪಡಿಸಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಸಂವಿಧಾನ ತಜ್ಞ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಹೇಳಿದರು.

ಅವರು ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ–14 ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಸಂವಿಧಾನದ ಕುರಿತು ಜನಸಾಮಾನ್ಯರಲ್ಲಿ ಇರುವ ಅನೇಕ ಗೊಂದಲಗಳಿಗೆ ಕಾರಂತರ ಕಾದಂಬರಿಗಳಲ್ಲೇ ಉತ್ತರ ದೊರೆಯುತ್ತದೆ. ಸಮಾಜದಲ್ಲಿ ಸಮಾನತೆ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಅಗತ್ಯತೆಯನ್ನು ಕಾರಂತರು ತಮ್ಮ ಸಾಹಿತ್ಯದ ಮೂಲಕ ಬಿಂಬಿಸಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಕಾರಂತರು ತಮ್ಮ ಕಾದಂಬರಿಗಳಲ್ಲಿ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದವರು. ಹಿಂದುಳಿದ ಸಮುದಾಯವನ್ನು ಮುಖ್ಯ ವಾಹಿನಿಗೆ ತರಲು ಅವರು ಸಾಹಿತ್ಯದ ಮೂಲಕ ಪ್ರಯತ್ನಿಸಿದ್ದಾರೆ. ಪ್ರತಿಯೊಬ್ಬರೂ ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಬೆಳೆಸಿಕೊಳ್ಳುವುದು ಭಾರತೀಯರ ಕರ್ತವ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶೈಲಜಾ ವೈ.ವಿ., ಉಪನ್ಯಾಸಕಿ ಸೌಮ್ಯ ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯ ಸತೀಶ್ ಕೊಡವೂರು ಸ್ವಾಗತಿಸಿದರು. ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮ ನಿರೂಪಿಸಿ, ಲಾವಣ್ಯ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles