Monday, September 28, 2026

spot_img

ಕಾರಿನಲ್ಲಿ ಕರೆತಂದು ತಾಯಿಯನ್ನು ರಸ್ತೆಯಲ್ಲೇ ಬಿಟ್ಟುಹೋದ ಮಗ

ಉಡುಪಿ: ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ಮಗನೊಬ್ಬ ತೆರಳಿರುವ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ದಿಕ್ಕು ತೋಚದೆ ಕಂಗಾಲಾಗಿದ್ದ 70 ವರ್ಷದ ವೃದ್ಧೆಯನ್ನು ಸಮಾಜಸೇವಕರ ನೆರವಿನಿಂದ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಸಮೀಪ ವೃದ್ಧೆಯೊಬ್ಬರು ಅಸಹಾಯಕ ಸ್ಥಿತಿಯಲ್ಲಿ ಚಡಪಡಿಸುತ್ತಿರುವುದನ್ನು ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಗಮನಿಸಿದ್ದಾರೆ. ತಕ್ಷಣ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ದೊರೆಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನಿತ್ಯಾನಂದ ಒಳಕಾಡು ಅವರು, 112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನೊಂದಿಗೆ ವೃದ್ಧೆಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ದಾಖಲಾತಿ ಪ್ರಕ್ರಿಯೆ ವೇಳೆ ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ಹಾಗೂ ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ತಿಳಿಸಿದ್ದಾರೆ. ತನ್ನ ಮಗ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿದ್ದಾನೆ ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಿತ್ಯಾನಂದ ಒಳಕಾಡು ಅವರು ಮಹಿಳಾ ಪೊಲೀಸ್ ಠಾಣೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ. ವೃದ್ಧೆಯ ಕುಟುಂಬದವರ ಪತ್ತೆ ಹಾಗೂ ಮುಂದಿನ ಕ್ರಮದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles