ಕಾರ್ಕಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಿಸಲಾದ 6 ಕೋಟಿ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಕಳ ಶಾಸಕ ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರುಗಳಾದ ಎಂ. ವೀರಪ್ಪ ಮೊಯಿಲಿ, ಉದಯ್ ಶೆಟ್ಟಿ ಮುನಿಯಾಲು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಸಮುದಾಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಭವನವನ್ನು ನಿರ್ಮಿಸಲಾಗಿದ್ದು, ಸ್ಥಳೀಯ ಜನತೆಗೆ ಇದು ಬಹುಪಯೋಗಿಯಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.



