ಉಡುಪಿ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳನ್ನು ಗುರಿಯಾಗಿಸಿಕೊಂಡು ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಮನೋತೋಷ್ ಕಾಯಲ್ (39)ರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬೆಳಗಿನ ಸಮಯದಲ್ಲಿ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ, ಬಹುಕಾಲದಿಂದ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಬೀಗ ಒಡೆದು ಕಳ್ಳತನ ನಡೆಸುತ್ತಿದ್ದ. ಕಳ್ಳತನದ ವೇಳೆ ಮನೆಯಲ್ಲಿದ್ದ ಬ್ಯಾಟರಿಯನ್ನು ಆರೋಪಿ ಅಪಹರಿಸಿದ್ದಾನೆ.

ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ರು ತನಿಖೆ ನಡೆಸಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.



