Tuesday, March 3, 2026

spot_img

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ಉದ್ಘಾಟನೆ

ಕಾರ್ಕಳ : ಸುದ್ದಿ ಮಾಡುವುದಷ್ಟೇ ಪತ್ರಕರ್ತರ ಜವಾಬ್ದಾರಿಯಾಗಬಾರದು, ಇದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.

ಅವರು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಬ್ರೇಕಿಂಗ್ ನ್ಯೂಸ್ ನೆಪದಲ್ಲಿ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ,ಸಾಮಾಜಿಕ ಬದ್ದತೆ ಹಾಗೂ ಜವಾಬ್ದಾರಿಯ ಜತೆಗೆ ಸುದ್ದಿಗೆ ಮಹತ್ವ ಕೊಟ್ಟು ಸಾಮಾಜಿಕ ಜವಾಬ್ದಾರಿ ನಿರ್ವಹಿಸುವ ಹೊಣೆಗಾರಿಕೆ ಪತ್ರಕರ್ತರು ನಿಭಾಯಿಸಬೇಕೆಂದು ಕಿವಿಮಾತು ಹೇಳಿದರು.

 ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನೂತನ ಪತ್ರಿಕಾ ಭವನವನ್ನು ಉದ್ಘಾಟಿಸಿ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣಿದ್ದಂತೆ, ಸಮಾಜದ ಆಗುಹೋಗುಗಳ ಸ್ಪಂದಿಸುವ ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳು ಹಾಗೂ ಸ್ವಂತ ಕಟ್ಟಡದ ಅವಶ್ಯಕತೆಯಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಬೇಕಾದ ಅಗತ್ಯತೆಯಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ತಹಸೀಲ್ದಾರ್ ಪ್ರದೀಪ್ ಕುಮಾರ್ ಆರ್,  ರಾಜ್ಯ ಕ್ವಾರಿ ಮತ್ತುಕ್ರಶರ್ಸ್ ಅಸೋಸಿಯೇಷನ್ (ರಿ)ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ,  ಕೆಎಂಸಿ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಮೋಹನ್ ಶೆಟ್ಟಿ,ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಸಾಂದರ್ಭಿಕವಾಗಿ ಮಾತನಾಡಿದರು. ಉದ್ಯಮಿಗಳಾದ ಬೋಳ ಪ್ರಶಾಂತ್ ಕಾಮತ್,  ಮೊಹಮ್ಮದ್ ಗೌಸ್, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.

 ಜಿಲ್ಲಾ ಸಮಿತಿ ಸದಸ್ಯ ಉದಯ ಮುಂಡ್ಕೂರು ಸ್ವಾಗತಿಸಿ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಹರೀಶ್ ಸಚ್ಚರಿಪೇಟೆ ವಂದಿಸಿದರು. ಕೃಷ್ಣ ಅಜೆಕಾರು ಹಾಗೂ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ನಾಗೇಶ್ ನಲ್ಲೂರು ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles