ಕುಂದಾಪುರ: ಕುಂದಾಪುರ ಉಪ ವಿಭಾಗಾಧಿಕಾರಿ ಕೆಎಎಸ್ ಅಧಿಕಾರಿ ಮಹೇಶ್ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕುಂದಾಪುರದ ಉಪ ವಿಭಾಗಾಧಿಕಾರಿಯಾಗಿದ್ದ ಮಹೇಶ್ಚಂದ್ರ ಅವರು ಕರ್ತವ್ಯ ಲೋಪವೆಸಗಿದ್ದಾರೆ ಎಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಯವರ ವರದಿ ಆಧಾರದ ಮೇರೆಗೆ ಸರಕಾರದ ಅಧೀನ ಕಾರ್ಯದರ್ಶಿ ಇಲಾಕ ವಿಚಾರಣೆಯನ್ನ ಬಾಕಿ ಇರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಹೇಶ್ಚಂದ್ರ ಅವರು ಕಳೆದ ವರ್ಷವಷ್ಟೇ ಕುಂದಾಪುರದ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿಂದೆ ಕುಂದಾಪುರದ ಉಪ ವಿಭಾಗಾಧಿಕಾರಿಯಾಗಿ ಜನಮನ್ನಣೆಗೆ ಪಾತ್ರರಾಗಿದ್ದ ದಕ್ಷ ಅಧಿಕಾರಿ ರಶ್ಮಿ ಅವರನ್ನು ರಾಜಕೀಯ ಒತ್ತಡ ಬಳಸಿ ವರ್ಗಾವಣೆ ಮಾಡಲಾಗಿತ್ತು. ರಶ್ಮಿ ಅವರ ತೆರವಾದ ಸ್ಥಾನಕ್ಕೆ ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ಮಹೇಶ್ಚಂದ್ರ ಅವರನ್ನು ನೇಮಕಗೊಳಿಸಲಾಗಿತ್ತು. ಸದ್ಯ ಮುಂದಿನ ಆದೇಶದವರೆಗೆ ಕುಂದಾಪುರ ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರಿಯಾಗಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆಯವರು ನೇರವಾಗಿ ಸುವಂತೆ ಆದೇಶಿಸಲಾಗಿದೆ